ಹಿರಿಯ ಸಾಹಿತಿ ಕೆ ಎಸ್ ನಿಸಾರ್ ಅಹಮದ್ ಅವರ ನಿಧನ ದುಃಖ ತಂದಿದೆ. ಅವರು ಪ್ರಾಧ್ಯಾಪಕರಾಗಿ, ಭೂ ವಿಜ್ಞಾನಿಯಾಗಿಯೂ ಸೇವೆ ಸಲ್ಲಿಸಿದ್ದರು. ಸಂವೇದನಾಶೀಲ ಲೇಖಕರಾಗಿ, ಜನಪ್ರಿಯ ಕವಿಯಾಗಿ ಅವರು ಗುರುತಿಸಿಕೊಂಡಿದ್ದರು. 1/2
ನಿತ್ಯೋತ್ಸವದ ಕವಿ, ಕನ್ನಡ ಕಾವ್ಯ ಜಗತ್ತಿಗೆ ನವೋಲ್ಲಾಸ ತಂದುಕೊಟ್ಟ ಉತ್ಸಾಹದ ಚಿಲುಮೆ ಪ್ರೊ. ಕೆ ಎಸ್ ನಿಸಾರ್ ಅಹಮದ್ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ. ಅವರ ಕುಟುಂಬಕ್ಕೆ, ಸಾರಸ್ವತ ಲೋಕಕ್ಕೆ ಇವರ ಅಗಲಿಕೆಯನ್ನು ಭರಿಸುವ ಶಕ್ತಿ ದೊರೆಯಲಿ. ಪ್ರೊ. ನಿಸಾರರಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ!
— Dr. Ashwathnarayan C. N. (@drashwathcn) May 3, 2020
ನಿತ್ಯೋತ್ಸವದ ಕವಿ ಪ್ರೊ. ಕೆ.ಎಸ್. ನಿಸಾರ್ ಅಹಮದ್ ಅವರ ನಿಧನಕ್ಕೆ ತೀವ್ರ ಕಂಬನಿ ಮಿಡಿಯುತ್ತೇನೆ. ಮನಸು ಗಾಂಧಿಬಜಾರು ಹಾಗು ನಿತ್ಯೋತ್ಸವ ಇವು ನಿಸಾರ್ ಅವರ ಪ್ರಸಿದ್ಧ ಕವನ ಸಂಕಲನಗಳಾಗಿವೆ. ನಿಸಾರ್ ಅಹಮದ್ ಸಂವೇದನಾಶೀಲ ಹಾಗೂ ಜನಪ್ರಿಯ ಕವಿ. ಇವರ ನಿಧನದಿಂದ ಬಹುಮುಖ ಪ್ರತಿಭೆಯ ಸಾಹಿತ್ಯ ಪ್ರಭೆ ಮುಸುಕಾದಂತಾಗಿದೆ. 1/3 pic.twitter.com/Vwp3v6Be59