ಹೀಗಿರುವಾಗ ಪ್ರಾದೇಶಿಕತೆ ಪ್ರದರ್ಶನ ಮತ್ತು ಭಾಷಾಂಧತೆಯ ಮಾತುಗಳು ದೇಶದ ಏಕತೆಗೆ ಮಾರಕವಾಗಿವೆ. ಇದನ್ನು ನಾನು ಖಂಡಿಸುತ್ತೇನೆ. ಕರ್ನಾಟಕದಲ್ಲಿ ಮರಾಠಿಗರು ಕನ್ನಡಿಗರೊಂದಿಗೆ ಬೆರೆತಿದ್ದಾರೆ, ಅದೇ ರೀತಿ ಮಹಾರಾಷ್ಟ್ರದ ಗಡಿ ಜಿಲ್ಲೆಗಳಲ್ಲಿರುವ ಕನ್ನಡಿಗರು ಮರಾಠಿಗರೊಂದಿಗೆ ಬೆರೆತಿದ್ದಾರೆ. (2/3)
‘ಕರ್ನಾಟಕ ಆಕ್ರಮಿತ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುತ್ತೇವೆ’ ಎಂದಿರುವ ಉದ್ಧವ್ ಠಾಕ್ರೆ ಅವರ ಹೇಳಿಕೆ ಚೀನಾದ ವಿಸ್ತರಣಾವಾದವನ್ನು ಧ್ವನಿಸುತ್ತಿದೆ. ಒಕ್ಕೂಟ ವ್ಯವಸ್ಥೆ ಒಪ್ಪಿ, ಭಾಷಾ ಆಧಾರದ ಮೇಲೆ ರಾಜ್ಯಗಳನ್ನು ವಿಂಗಡಿಸಿಕೊಂಡು, ಅದಕ್ಕೆ ಬದ್ಧವಾಗಿ ನಡೆಯುತ್ತಿರುವಾಗ ಇಂಥ ವಿಸ್ತರಣಾವಾದ ಸೌಹಾರ್ದಕ್ಕೆ ಧಕ್ಕೆ ತರಲಿದೆ. 1/7